LatestUncategorized

*ಹೈಕಮಾಂಡ್ ಹೇಳಿತೆಂದು ಹೋಗಿ ಸ್ಪರ್ಧಿಸಿದೆ; ನಾನು ನಿರುದ್ಯೋಗಿಯಾಗಿದ್ದೇನೆ ಎಂದ ವಿ.ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿಯೂ ಸೋಲನುಭವಿಸಿರುವ ವಿ.ಸೋಮಣ್ಣ ನನ್ನ ಪಾಡಿಗೆ ಕೆಲಸ ಮಾಡುತ್ತಾ ಇದ್ದೆ, ಈಗ ನಿರುದ್ಯೋಗಿಯಾಗಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ, ಸೋತಾಗಿದೆ, ಏನು ಮಾತನಾಡಲಿ? ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಎರಡು ಕ್ಷೇತ್ರಗಳನ್ನು ಚಾಲೇಂಜ್ ಆಗಿ ತೆಗೆದುಕೊಂಡಿದ್ದೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತೇ ಎಂದಿದ್ದಾರೆ.

Home add -Advt

ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಈಗ ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು ಹಾಗಾಗಿ ಪಕ್ಷದ ಮಾತು ಕೇಳಿದ್ದೇನೆ ಅಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ವಿ.ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಈ ಫಲಿತಾಂಶ ನಾವು ನಿರೀಕ್ಷೆ ಮಾಡಿರಲಿಲ್ಲ, ನಮ್ಮ ಎಣಿಕೆ ತಪ್ಪಾಗಿದೆ. ನಿಮ್ಮ ಜೊತೆ ನಾವಿದ್ದೇವೆ, ಪಕ್ಷ ಸದಾ ಇರುತ್ತೆ ಎಂದು ಹೇಳಿದ್ದಾರೆ.

https://pragati.taskdun.com/prabhulinga-navadagiresignadvocate-general/


Related Articles

Back to top button