Latest

ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಸಮನ್ಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ವಿ.ಸೋಮಣ್ಣ ವಿರುದ್ಧ ಸಮನ್ಸ್ ಜಾರಿಗೆ ನ್ಯಾ.ಬಿ.ಜಯಂತ್ ಕುಮಾರ್ ಆದೇಶ ಹೊರಡಿಸಿದ್ದು, ಏ.16ಕ್ಕೆ ಸಚಿವರು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Home add -Advt

2013ರಲ್ಲಿ ಸೋಮಣ್ಣ ವಿರುದ್ಧ ರಾಮಕೃಷ್ಣ ಎಂಬುವವರು ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಮಾಡಿ ಖಾಸಗಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿತ್ತು. ತನಿಖೆ ನಡೆಸಿದ ಪೊಲೀಸರು, ವಿ.ಸೋಮಣ್ಣ ಅವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿ, ಬಿ ರಿಪೋರ್ಟ್ ಸಲ್ಲಿಸಿದ್ದರು.

ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ ಸೋಮಣ್ಣ ಶಾಸಕರಾಗುವ ಮೊದಲಿನ ಆದಾಯ, ನಂತರದ ಆದಾಯ, ಆಸ್ತಿ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿಲ್ಲ. ಅವರ ತನಿಖೆ ಅಸಮರ್ಪಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಈ ನಿಟ್ಟಿನಲ್ಲಿ ಇದೀಗ ಸಚಿವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಚಿನ್ನ-ಬೆಳ್ಳಿ ದರದಲ್ಲಿ ಮತ್ತೆ ಏರಿಕೆ

Related Articles

Back to top button