
ಉಚಗಾಂವ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಪರೀಕ್ಷೆ ಮತ್ತು ವ್ಯಾಕ್ಸಿನೇಶನ್ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು. ಜನರು ಭಯಪಡದೆ ವ್ಯಾಕ್ಸಿನೇಶನ್ ಮಾಡಿಸಿಕೊಳ್ಳಬೇಕು. ನಿರ್ಲಕ್ಷ್ಯ ಮಾಡದೆ ಕೊರೋನಾ ಪರೀಕ್ಷೆ ಮಡಿಸಿಕೊಳ್ಳಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಗ್ರಾಮದಲ್ಲಿ ದಿನಕ್ಕೆ 50 ಜನರಿಗೆ ವ್ಯಾಕ್ಸಿನೇಷನ್ ಹಾಗೂ 8-10 ಜನರ ಗಂಟಲು ದ್ರವಗಳ ಮಾದರಿಯನ್ನು ಸಂಗ್ರಹಿಸುತ್ತಿದ್ದು, ಇದನ್ನು ಇನ್ನಷ್ಟು ಹೆಚ್ಚಿಸಬೇಕು.
ಮನೆ ಮನೆಗಳಿಗೆ ತೆರಳಿ ಗಂಟಲು ದ್ರವಗಳ ಮಾದರಿಯನ್ನು ಪಡೆಯಬೇಕು ಎಂದು ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಪತಿಯ ಫೋನ್ ಪರಿಶೀಲಿಸಿದ ಪತ್ನಿ; 1 ಲಕ್ಷ ದಂಡ ವಿಧಿಸಿದ ಕೋರ್ಟ್