ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಇಂದಿನಿಂದ ಲಸಿಕೆ ನೀಡಿಕೆ ಪುನರಾರಂಭವಾಗಿದೆ. 18ರಿಂದ 44 ವರ್ಷದೊಳಗಿನ ವಯೋಮಾನದವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದ್ದು ಫ್ರಂಟ್ ಲೈನ್ ವರ್ಕರ್ಸ್ ಗೆ ಆದ್ಯತೆ ಮೇರೆಗೆ ನೀಡಲಾಗುತ್ತಿದೆ.
ಕೋವಿಡ್ ಕರ್ತವ್ಯಕ್ಕೆ ನೇಮಕಗೊಂಡಿರುವ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಅಂಗವೈಕಲ್ಯ ಫಲಾನುಭವಿಗಳು, ಕೈದಿಗಳು, ಚಿತಾಗಾರದಲ್ಲಿ ಕೆಲಸ ಮಾಡುವವರು, ಮಾಧ್ಯಮದವರು, ಆಟೋ, ಕ್ಯಾಬ್ ಚಾಲಕರು ಕೋವಿಡ್ ವಾರಿಯರ್ಸ್ ಎಂದು ಸರ್ಕಾರ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಈ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆದ್ಯತೆ ಮೇರೆಗೆ ಬೇರೆಯವರಿಗೂ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಬೆಳಗಾವಿ ಸೇರಿದಂತೆ ಎಲ್ಲೆಡೆ ರಸ್ತೆಗಿಳಿದ ಖಾಕಿ ಪಡೆ; ಮುಲಾಜಿಲ್ಲದೇ ಕ್ರಮ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ