NationalPolitics

*ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಟೀಕಿಸಿದ ಸಂಸದ ತೇಜಸ್ವಿ ಸೂರ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಹಾಗೂ ತುಮಕೂರು ನಡುವಿನ ಮೆಟ್ರೋ ಯೋಜನೆ ಇದೊಂದು ಅವೈಜ್ಞಾನಿಕ ಹೆಜ್ಜೆ ಎಂದು ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡಾ ಈ ಯೋಜನೆ ಮೂರ್ಖತನದಿಂದ ಕೂಡಿದ್ದು ಎಂದು ಟೀಕಿಸಿದ್ದಾರೆ.

ತುಮಕೂರಿಗೆ ಮೆಟ್ರೋ ವಿಸ್ತರಣೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರ ಮೂರ್ಖತನದಿಂದ ಕೂಡಿದ್ದು. ಅದರ  ಬದಲಾಗಿ ಅವರು ಬೆಂಗಳೂರಿನಲ್ಲಿ ಬಾಕಿ ಇರುವ ಮೆಟ್ರೋ ಮಾರ್ಗಗಳ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸುವ ಮತ್ತು ಬೆಂಗಳೂರಿನೊಳಗೆ ಮೆಟ್ರೋ ಜಾಲವನ್ನು ಮತ್ತಷ್ಟು ವಿಸತರಿಸುವತ್ತ ಗಮನಹರಿಸಬೇಕು ಎಂದು ಟ್ವಿಟ್ ಮಾಡಿದ್ದಾರೆ.

ಆದರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ವಿ.ಸೋಮಣ್ಣ ತುಮಕೂರಿನ ಜನರಿಗೆ ಕೇಂದ್ರದ ಎಲ್ಲಾ ಸೌಲಭ್ಯಗಳು ಸಿಗಬೇಕು. ಇನ್ನೊಂದು ತಿಂಗಳಲ್ಲಿ ತುಮಕೂರು ಜನರಿಗೆ ದೊಡ್ಡ ಸುದ್ದಿ ಕೊಡುತ್ತೇವೆ. ಈ ಯೋಜನೆಯನ್ನು ನನ್ನ ಅವಧಿಯಲ್ಲೇ ಕಾರ್ಯರೂಪಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button