Karnataka NewsLatestPolitics

*ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಮಠದ ವಸತಿ ನಿಲದಲ್ಲಿರುವ ಮಕ್ಕಳಿಂದ ವಚನಾನಂದ ಶ್ರೀಗಳು ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬಾಲಕನ ತಾಅಯಿಯೊಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಅಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಲಕ್ಷ್ಮೀಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐ ಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಕೇಸ್ ವರ್ಗಾಯಿಸಲಾಗಿದೆ. ತನಿಖೆ ಆರಂಭಿಸಿರುವ ಪೊಲೀಸರು ದೂರುದಾರರ ಹೇಳಿಕೆ ಪಡೆದುಕೊಂಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button