Kannada NewsKarnataka NewsLatest
*ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪಿಠದ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ವಿಶೇಷ ಜಿಲ್ಲಾ ನ್ಯಾಯಲಯ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಠದ ವಸತಿ ನಿಲಯದಲ್ಲಿದ್ದ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವುದು ಸೇರಿದಂತೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರು ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹರಿಹರ ಮಠದ ಹಾಸ್ಟೆಲ್ ನಲ್ಲಿದ್ದ ಮೂವರು ಮಕ್ಕಳು CWC ಮುಂದೆ ದೂರು ನೀಡಿದ್ದರು.
ಈ ಸಂಬಂಧ ವಚನಾನಂದ ಸ್ವಾಮೀಜಿ ಏ.21ರಂದು ವಿಶೇಷ ಜಿಲ್ಲಾ ನ್ಯಾಯಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿ ಇಲ್ಲದೇ ವ್ಯಾಪ್ತಿ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.



