
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ವೈಕುಂಠ ಏಕಾದಶಿ. ವೈಕುಂಠದ ಉತ್ತರ ಬಾಗಿಲ ಮೂಲಕ ನಾರಾಯಣ ಮುಕ್ಕೋಟಿ ದೇವತೆಗಳಿಗೆ ದರ್ಶನ ನೀಡುತ್ತಾನೆ ಎಂಬುದು ಪ್ರತೀತಿ. ಅದೇ ಕಾರಣಕ್ಕೆ ವೈಷ್ಣವ ಆಲಯಗಳಲ್ಲಿ ವಿಶೇಷವಾದ ವೈಕುಂಠ ದ್ವಾರ ನಿರ್ಮಿಸಿ ಭಕ್ತರಿಗೆ ಪ್ರವೇಶ ಕಲ್ಪಿಸಲಾಗುತ್ತದೆ. ಹಿನ್ನಲೆಯಲ್ಲಿ ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಉತ್ಸವಗಳು ನಡೆಯುತ್ತಿವೆ. ವಿಶೇಷವಾಗಿ ವಿಷ್ಣು, ವೆಂಕಟೇಶ್ವರ ದೇವಾಲಯಗಳಲ್ಲಿ ವೈಕುಂಠ ದ್ವಾರಗಳನ್ನು ನಿರ್ಮಿಸಲಾಗಿದೆ.
ಏಕಾದಶಿ ದಿನ ಬೆಳಗ್ಗೆಯೇ ಎದ್ದು ಸ್ನಾನ ಮಾಡಿ ಉಪವಾಸದಿಂದ ವಿಷ್ಣು ದಶಾವತಾರದ ದೇವಾಲಯಕ್ಕೆ ಹೋಗಿ ವೈಕುಂಠ ದ್ವಾರದ ಮೂಲಕವೇ ದೇವರ ದರ್ಶನ ಪಡೆಯಬೇಕು. ಆ ನಂತರ ಸನ್ನಿಧಿಯಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸಬೇಕು. ಇದರಿಂದ ಹರಿ ನಾರಾಯಣನು ಸಂತೃಪ್ತನಾಗಿ ಭಕ್ತರಿಗೆ ಒಳಿತನ್ನ ಮಾಡುತ್ತಾನೆ ಎಂಬ ನಂಬಿಕೆಯಿದೆ.
ಕೋಟೆ ವೆಂಕಟರಮಣ ದೇವಾಲಯ, ವೈಯಾಲಿಕಾವಲ್‌ನಲ್ಲಿರುವ ತಿರುಪತಿ ತಿರುಮಲ ದೇವಸ್ಥಾನ, ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶ್ರೀನಿವಾಸ ದೇವಾಲಯ, ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇವಾಲಯ, ಶ್ರೀನಗರದ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ, ಹೊಸಕೆರೆಹಳ್ಳಿಯ ಶ್ರೀ ದುರ್ಗಾ ಹಾಗೂ ಶ್ರೀ ಲಕ್ಷೀ ವೆಂಕಟೇಶ್ವರ ದೇವಾಲಯ, ಜೆ.ಪಿ.ನಗರ 2ನೇ ಹಂತದಲ್ಲಿರುವ ತಿರುಮಲಗಿರಿ ದೇವಸ್ಥಾನ, ಸಂಜಯನಗರದ ರಾಧಾಕೃಷ್ಣ ಮಂದಿರ, ಸೇಧಿರಿಧಿದಂತೆ ಹಲವು ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ