ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಅಕ್ರಮ, ತೈಲ ಮತ್ತು ಹಾಲು ದರಯೇರಿಕೆ ಹಾಗೂ ಇತರೆ ಹಗರಣಗಳನ್ನು ವಿರೋಧಿಸಿ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಎಲ್ಲಾ ಜಿಲ್ಲಾ ಕೇಂದ್ರದಲ್ಲಿರುವ ವಾಲ್ಮೀಕಿ ನಿಗಮಗಳ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದೆ.
ಕೊಪ್ಪಳದ ಅಶೋಕ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೂ ನಡೆಯಲಿರುವ ಪ್ರತಿಭಟನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಶಾಸಕ ಗಾಲಿ ಜನಾರ್ಧನರಡ್ಡಿ ಸೇರಿ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.
ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪಾಂಚಜನ್ಯ ಕಚೇರಿಯಿಂದ ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರನ್ನು ಆಜಾದ್ ಪಾರ್ಕ್ ಬರುತ್ತಿದ್ದಂತೆ ಪೊಲೀಸರು ಅಡ್ಡಗಟ್ಟಿರುವ ಘಟನೆ ನಡೆದಿದೆ. ಪಾಂಚಜನ್ಯದಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ವದಗಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ