Cancer Hospital 2
Beereshwara 36
LaxmiTai 5

*ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ: ಆರು ಜನರ ವಿರುದ್ಧ ದೂರು ದಾಖಲು*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಪ್ರಕರಣವು ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಭಂದಿಸಿದ ಒಟ್ಟು ಆರು ಜನರ ವಿರುದ್ಧ ದೂರು ದಾಖಲಾಗಿದೆ.‌

Emergency Service

ನಿಗಮದ ಪ್ರಧಾನ ವ್ಯವಸ್ಥಾಪಕರ ದೂರಿನಂತೆ ಈ ಪ್ರಕರಣ​​ದಲ್ಲಿ ಇದೀಗ 6 ಜನ ಯೂನಿಯನ್​​​ ಬ್ಯಾಂಕ್​​ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್​​​​​​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ.

ನಿಗಮದಲ್ಲಿ 94.73 ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇನ್ನು ಪ್ರಕರಣದ ತನಿಖೆಯನ್ನು ಈಗಾಗಲೇ ಸರ್ಕಾರ ಸಿಐಡಿ ವಹಿಸಿದೆ. ನಿಗಮದಲ್ಲಿ ನಡೆದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಚಿವ ಬಿ.ನಾಗೇಂದ್ರ ಈಗಾಗಲೇ ಸ್ಪಷ್ಟನೆ ನೀಡಿದ್ದು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಒತ್ತಾಯಿಸಿವೆ.

Bottom Add3
Bottom Ad 2