ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದ ಕೆಂಚಪ್ಪ ಲೇಔಟ್ ನ ನಿವಾಸದಲ್ಲಿ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 187 ಕೋಟಿ ರೂ. ಹಗರಣ ನಡೆದಿದೆ. ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳು ಮಾಡಿದ ತಪ್ಪು ನನ್ನ ಮೇಲೆ ಹಾಕುತ್ತಿದ್ದಾರೆ, ನನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆಗೆ ಶರಣಾದವರು. 6 ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚಂದ್ರಶೇಖರ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶುಚಿಸ್ಮಿತ ಈ ಮೂವರು ತನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ