
ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬ್ಯಾಂಕ್, ಹಣ ವರ್ಗಾವಣೆ ವಂಚನೆ ಬಗ್ಗೆ ಬ್ಯಾಂಕ್ ಗಮನಕ್ಕೆ ಬಂದಿದ್ದು, ಯುನಿಯನ್ ಬ್ಯಾಂಕ್ ನ ಎಂ.ಜಿ.ರಸ್ತೆ ಶಾಖೆಯಲ್ಲಿನ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಹಣ ವರ್ಗಾವಣೆ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಬಿಐಗೆ ಔಪಚಾರಿಕ ದೂರು ನೀಡಲಾಗಿದೆ. ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಅದರಲ್ಲಿ 88 ಕೋಟಿ ಕಾನೂನುಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಕೆಲ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇದರಲ್ಲಿ ಯೂನಿಯನ್ ಬ್ಯಾಂಕ್ ನ ಕೆಲ ಅಧಿಕಾರಿಗಳ ಹೆಸರು ಕೂಡ ಇತ್ತು. ಇದೀಗ ಯುನೀಯನ್ ಬ್ಯಾಂಕ್ ಸಿಬಿಐಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ