ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಐಟಿ ರಚನೆ ಮಾಡಿದೆ.
ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್, ನಿಗಮದಲ್ಲಿ ನಡೆದ 187 ಕೋಟಿ ಹಗರಣದ ಬಗ್ಗೆ ಹಾಗೂ ಅದರಲ್ಲಿ 88 ಕೋಟಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆಯಾಗಿದೆ ಎಂದು ಆರೋಪಿ ಕೆಲ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಶಿವಮೊಗ್ಗದ ವಿನೋಬಾನಗರ ನಿವಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಈ ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದರು. ಹಣ ಅವ್ಯವಹಾರ ಹಾಗೂ ವಂಚನೆ ಆಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿತ್ತು.
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ಹಾಗೂ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ರಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ