
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಮೂರು ತಿಂಗಳ ಬಳಿಕ ಬಿ.ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಯಲ-ಇಡಿ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಾಗೇಂದ್ರ ಜೈಲು ಸೇರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ