Politics

*ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶ ಹೊರಡಿಸಿದೆ.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ಕೋರ್ಟ್ ಗೆ ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿತ್ತು. ಇಡಿ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ.

ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಬಿ.ನಾಗೇಂದ್ರ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button