Karnataka News

*ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳು SIT ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.

ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ, ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣ ಹಾಗೂ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಮನೀಶ್ ಕರ್ಬೀಕರ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದೆ.

Home add -Advt

Related Articles

Back to top button