Latest

*ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ.

ಎರಡು ದಿನಗಳ ಹಿಂದೆ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಅದರಲ್ಲಿ 88 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಹಾಗೂ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಮೂವರಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅಮಾನತುಗೊಂಡವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button