ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣ ಕುರಿತು ತನಿಖೆ ಮಾಡಿದ್ದ ಇ.ಡಿ. ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ತಮ್ಮವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ನ್ಯಾಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಈ ಬಗ್ಗೆ ಆದೇಶಿಸಿದೆ.
ಇ.ಡಿ. ಡೆಪ್ಯೂಟಿ ಡೈರೆಕ್ಟರ್ ಮನೋಜ್ ಮಿತ್ತಲ್ ಹಾಗೂ ಮತ್ತೋರ್ವ ಇ.ಡಿ.ಅಧಿಕಾರಿ ಮುರಳಿ ಕಣ್ಣನ್ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಕೋರ್ಟ್ ರದ್ದುಗೊಳಿಸಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರದ್ದ ಹೇಳಿಕೆಯನ್ನು ನೀಡುವಂತೆ ಇ.ಡಿ.ಅಧಿಕಾರಿಗಳು ಒತ್ತಾಯ ಹಾಕಿದ್ದರು ಎಂದು ಆರೋಪಿಸಿ ವಾಲ್ಮೀಕಿ ನಿಗಮದ ಅಧಿಕಾರಿ ಕಲ್ಲೇಶ್ ಎಂಬುವವರು ಕೇಸ್ ದಾಖಲಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ