*ಭೀಕರ ಅಪಘಾತ; 6 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವ್ಯಾನ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರ- ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಾರ್ನರ್ ಆಸ್ಪತ್ರೆಗೆ ದಾಖಲಿಸಲಗೈದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದ ಘಟನೆಯೂ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.