Belagavi NewsBelgaum NewsKannada NewsKarnataka News

ಬೆಳಗಾಂ ಶುಗರ್ಸ್ ನಲ್ಲಿ ಪರಿಸರ ದಿನಾಚರಣೆಯ ನಿಮಿತ್ಯ ವನಮಹೋತ್ಸವ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುದಲಿಯ ಬೆಳಗಾಂ ಶುಗರ್ಸ ಕಾರ್ಖಾನೆಯ ಆವರಣದಲ್ಲಿ 2024 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಆಚರಿಸಲಾಯಿತು. 

ಕಾರ್ಖಾನೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿಗಳಾದ ಪ್ರದೀಪಕುಮಾರ ಇಂಡಿ ಮಾತನಾಡಿ, ಪರಿಸರ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗದೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಮೂಲಕ ಪರಿಸರದ ಸಂರಕ್ಷಣೆಗಾಗಿ ಪ್ರತಿಯೊಬ್ಬರು ನಿರಂತರವಾಗಿ ಶ್ರಮವಹಿಸಬೇಕಾಗಿದೆ. ಗೀಡ- ಮರಗಳನ್ನು ನಾಶಪಡಿಸುತ್ತಿರುವುದರಿಂದ ಅರಣ್ಯ ಸಂಪತ್ತು ಮಾಯವಾಗುತ್ತಿದೆ, ಇದರಿಂದಾಗಿ ಮೆಳೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದ್ದು, ಅಂತರ್ಜಲದ ಮಟ್ಟ ಕಡಿಮೆಯಾಗುತ್ತಿದೆ. ಅಲ್ಲದೇ ಜಾಗತಿಕವಾಗಿ ಹವಾಮಾನ ವೈಪರಿತ್ಯ ಉಂಟಾಗಿ ತಾಪಮಾನ ಹೆಚ್ಚಾಗುತ್ತಿದ್ದು, ಪ್ರಸಕ್ತ ವರ್ಷದಲ್ಲಿ ದೆಹಲಿಯಲ್ಲಿ ಅತ್ಯಧಿಕ 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ, ಇದು ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದಾಗಿ ಜೀವರಾಶಿಗಳ ಮೇಲೆ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದರು. 

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರುಗೊಳಿಸುವುದರಿಂದ ಮಾತ್ರ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದಾಗಿದೆ. ಈ ದಿಸೆಯಲ್ಲಿ ಎಲ್ಲರೂ ಪರಿಸರ ಸಂರಕ್ಷಣೆಯ ಜವಾಬ್ದಾರಿ ಹೊತ್ತುಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ತಮ್ಮ ಮನೆ, ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಲಾಲನೆ-ಪಾಲನೆ ಮಾಡುವ ಮೂಲಕ ಅರಣ್ಯ ಸಂಪತ್ತನ್ನು ವೃದ್ದಿಸುವ ನಿಟ್ಟಿನಲ್ಲಿ ಶ್ರಮಿಸಿ  ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕಾಗಿದೆ. ಮರಗಳನ್ನೇ ಅವಲಂಬಿಸಿ ಬದುಕುವ ಪಕ್ಷಿ ಸಂಕುಲವನ್ನು ಉಳಿಸಲು ಅವುಗಳಿಗೆ ಆಹಾರವಾಗಬಲ್ಲ ಹಣ್ಣಿನ ಗೀಡಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಹೇಳಿದರು. 

ನಮ್ಮ ಕಾರ್ಖಾನೆಯ ಆವರಣದಲ್ಲಿ ಈಗಾಗಲೇ ಸುಮಾರು 4000 ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿಯು ನಮ್ಮ ಕಾರ್ಖಾನೆಯ ಆವರಣದಲ್ಲಿ ಸುಮಾರು 1500 ವಿವಿಧ ತಳಿಯ ಗಿಡಗಳನ್ನು ನೆಟ್ಟು ಪೋಷಿಸಲಾಗುವದು ಎಂದರು.

ಸದರಿ ಕಾರ್ಯಕ್ರಮದಲ್ಲಿ, ಹಿರಿಯ ಉಪಾಧ್ಯಕ್ಷರಾದ ಎಲ್.ಆರ್.ಕಾರಗಿ, ಉಪಾಧ್ಯಕ್ಷರಾದ ಎ.ಎಸ್.ರಾಣಾ,   ಪ್ರಧಾನ ವ್ಯವಸ್ಥಾಪಕರಾದ. ಎಸ್ ಆರ್ ಬಿರ್ಜೆ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎನ್.ಬಿ ಚೌಗಲಾ, ಬಿ. ಎ ಪಾಟೀಲ್, ಹಿರಿಯ ವ್ಯವಸ್ಥಾಪಕ ವರ್ಗದವರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಕಾರ್ಖಾನೆಯ ಕಾರ್ಮಿಕರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button