ಪ್ರಗತಿವಾಹಿನಿ ಸುದ್ದಿ; ಭೋಪಾಲ್: ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭವಾಗಿ ಕೆಲ ದಿನಗಳಲ್ಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದೀಗ ರೈಲಿನಲ್ಲಿ ನೀಡಲಾಗಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಪಾಲ್ ನಿಂದ ಗ್ವಾಲಿಯರ್ ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ರೈಲಿನಲ್ಲಿ ನೀಡಲಾಗಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕ ಈ ಬಗ್ಗೆ ಟ್ವಿಟರ್ ನಲ್ಲಿ ಫೋಟೋ ಹಾಕಿ ಐಆರ್ ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಪುಂಡೂಕ್ ಎಂಬ ಟ್ವಿಟರ್ ಖಾತೆಯಲ್ಲಿ ಜಿರಳೆ ಇರುವ ಚಪಾತಿ ಊಟದ ಫೋಟೋ ವೈರಲ್ ಆಗಿದೆ. ಈ ಅವಘಡದ ಬಳಿಕ ಐಆರ್ ಟಿಸಿ ಕ್ಷಮೆಯಾಚಿಸಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಆಹಾರ ತಯಾರಿಸುವಾಗ ಎಲ್ಲಾ ಮುನ್ನಚ್ಚರಿಕೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿದೆ.
ಇನ್ನು ಭೋಪಾಲ್ ನಿಂದ ಗ್ವಾಲಿಯರ್ ಗೆ ತೆರಳುತ್ತಿದ್ದ ಪ್ರಯಾಣಿಕನಿಗಾದ ಕೆಟ್ಟ ಅನುಭವಕ್ಕೆ ಭೋಪಾಲ್ ವಿಭಾಗದ ರೈಲ್ವೆ ಮ್ಯಾನೇಜರ್, ಪ್ರಯಾಣಿಕನಿಗೆ ಪರ್ಯಾಯ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ