Kannada NewsKarnataka NewsLatest
*ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ; ಗಾಜುಗಳು ಪುಡಿ ಪುಡಿ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ದೇಶದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭವಾದ ಕೆಲ ದಿನಗಳಿಂದಲೂ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ರಾಮನಗರದ ಹೊರವಲಯದಲ್ಲಿ ನಡೆದಿದೆ. ಕಲ್ಲು ತೂರಾಟಕ್ಕೆ ರೈಲಿನ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಪ್ರಯಾಣಿಕರು ಆತಂಕಗೊಂಡಿದ್ದಾರೆ.
ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಕೆಲ ದಿನಗಳ ಹಿಂದೆಯೂ ಇಂತಹದ್ದೇ ಘಟನೆ ನಡೆದಿತ್ತು. ಇದೀಗ ಮತ್ತೆ ಕಲ್ಲು ತೂರಾಟ ಘಟನೆ ಮರುಕಳಿಸಿದ್ದು, ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.