Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಜನರ ಬಹುದಿನಗಳ ಬೇಡಿಕೆ ಈಡೇರಿಕೆ; ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಕುಂದಾನಗರಿಗೂ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 02.00 ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 10.10 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.

Home add -Advt

ಶ್ರೀಘ್ರದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.


Related Articles

Back to top button