Belagavi NewsBelgaum NewsKannada NewsLatest

*ವಂಟಮೂರಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳು ಜೈಲಿನಿಂದ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: 2023 ಡಿಸೆಂಬರ್ 10ರಂದು ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯ ನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇದೀಗ ನಾಲ್ಕು ತಿಂಗಳ ಬಳಿಕ ಜಾಮೀನಿನನ ಮೇಲೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾಗುತ್ತಿದ್ದಂತೆ ಆರೋಪಿಗಳಿಗೆ ಕೆಲವರು ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ಧೂರಿಯಾಗಿ ಬೆಂಬಲಿಗರು ಸ್ವಾಗತಿಸಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ.

ಪ್ರೀತಿ-ಪ್ರೇಮದ ವಿಚಾರವಾಗಿ ಯುವತಿಯ ಮನೆಯವರು ಯುವಕನ ತಾಯಿಯನ್ನು ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಕಾಕತಿ ಠಾಣೆ ಪೊಲೀಸರು 13 ಆರೋಪಿಗಳನ್ನು ಬಂಧಿಸಿ ಬೆಳಗಾವಿ ಹಿಂಡಲಾ ಜೈಲಿಗೆ ರವಾನಿಸಿದ್ದರು.

Related Articles

Back to top button