*ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್: ಬೆಳಗಾವಿಗೆ ಆಗಮಿಸಿದ ಬಿಜೆಪಿ ಸತ್ಯಶೋಧನಾ ಟೀಂ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಗೆ ಆಗಮಿಸಿದೆ.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದ ಘಟನೆ ದೇಶಾದ್ಯಂತ ಸುದ್ದಿಯಾಗಿದ್ದು, ಈ ಅಮಾನವೀಯ ಘಟನೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಮಧ್ಯೆ ಬಿಜೆಪಿಯ ಸತ್ಯಶೋಧನಾ ಸಮಿತಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿದೆ.
ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರ ಅವರನ್ನೊಳಗೊಂಡ ನಿಯೋಗ ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಕಲೆಹಾಕಿದೆ.
ಬಳಿಕ ಬೆಳಗಾವಿಯ ವಂಟಮೂರಿ ಗ್ರಾಮದ ಘಟನಾ ಸ್ಥಳಕ್ಕೆ ನಿಯೋಗ ಭೇಟಿ ನೀಡಲಿದ್ದು, ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಧೈರ್ಯ ತುಂಬಲಿದೆ. ಘಟನೆಯ ಕುರಿತು ಮಾಹಿತಿ ಪಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ