*ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ: ಶನಿವಾರ ಸತ್ಯಶೋಧನಾ ಸಮಿತಿ ಬೆಳಗಾವಿಗೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ಹಿನ್ನೆಲೆಯಲ್ಲಿ ಬಿಜೆಪಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಜಿಲ್ಲೆ ವತಿಯಿಂದ ಬೆಳಗಾವಿಯಲ್ಲಿ ಪರಿಶಿಷ್ಠ ಪಂಗಡದ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ಕುರಿತು ಪ್ರತಿಭಟನಾ ಮೆರವಣಿಗೆ ನಡೆಸಿ, ವಸ್ತುಸ್ಥಿತಿ ಅರಿತು ಪ್ರಕರಣದ ಕುರಿತು ಶೀಘ್ರದಲ್ಲಿ ತಪ್ಪಿತಸ್ತರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಬೇಕೆಂದು ಬೃಹತ ಸಭೆ ನಡೆಸಲಾಯಿತು.
ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಪದಾಧಿಕಾರಿಗಳು, ಶಾಸಕರು, ಸಂಸದರು, ಮುಖಂಡರು, ಬಿಜೆಪಿ ಬೆಳಗಾವಿ ಮಹಾನಗರಜಿಲ್ಲಾಧ್ಯಕ್ಷ ಅನಿಲ ಬೆನಕೆ, ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಸಂಸದ ಅಣ್ಣಾಸಹೇಬ ಜೊಲ್ಲೆ, ಮಹಾಪೌರ ಶೋಭಾ ಸೋಮನಾಚೆ, ಮಹೇಶ ಕುಮಟಳ್ಳಿ, ವಿರೇಶ ಕಿವಡಸಣ್ಣವರ ಮತ್ತು ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾ ಹಾಗೂ ಉತ್ತರ ಮಂಡಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಘಟಕ ಸತ್ಯ ಶೋಧನಾ ಸಮಿತಿ ರಚಿಸಿದೆ. ನಾಲ್ವರು ಸಂಸದೆಯರು ಹಾಗೂ ಓರ್ವ ರಾಷ್ಟ್ರೀಯ ಕಾರ್ಯದರ್ಶಿ ಸಮಿತಿಯಲ್ಲಿದ್ದು, ಶನಿವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ