*ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಇಲಾಖೆಯಿಂದ ಅಗತ್ಯ ನೆರವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇತ್ತೀಚೆಗೆ ಬೆಳಗಾವಿ ಜಿಲ್ಲೆ ವೆಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇಡೀ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಇದಾಗಿದ್ದು, ಸಂತ್ರಸ್ತ ಮಹಿಳೆಗೆ ಸಾಧ್ಯವಾದ ಎಲ್ಲ ನೆರವು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.
ಈ ಕುರಿತು ಅವರು ಜಿಲ್ಲಾಧಿಕಾರಿಗೆ ಮತ್ತು ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಘಟನೆ ನಂತರ ನಾನೂ ಕೂಡ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ್ದೇನೆ. ಇಂತಹ ಘಟನೆಗಳು ಸಮಾಜದಲ್ಲಿ ಮರುಕಳಿಸಬಾರದು ಹಾಗೂ ಅನ್ಯಾಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಕೆಲಸ ಮಾಡಬೇಕಿದೆ.
ಸಂತ್ರಸ್ತ ಮಹಿಳೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಸೌಲತ್ತುಗಳನ್ನು ಒದಗಿಸಿಕೊಟ್ಟು, ಅವರಿಗೆ ನ್ಯಾಯ ಒದಗಿಸಿಕೊಡಲು ಬೇಕಾದ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವುದು ಹಾಗೂ ಮಹಿಳೆಗೆ ಇಲಾಖೆ ವತಿಯಿಂದ ಪರಿಹಾರಧನ ನೀಡಲು ತುರ್ತಾಗಿ ಕ್ರಮ ವಹಿಸಿ ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ