Kannada NewsKarnataka NewsLatest

*ಹಬ್ಬದ ದಿನವೇ ಮತ್ತೊಂದು ದುರಂತ: ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ತಾಯಿ ಹಾಗೂ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ ಶಂಕೆ ವ್ಯಕ್ತವಾಗಿದೆ. ಹಾವೇರಿ ತಾಲೂಕಿನ ವದಹಳ್ಳಿ ಬಳಿ ತಾಯಿ ಹಾಗೂ ಮಗಳು ಇಬ್ಬರೂ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸವಿತಾ ನಾಗರಾಜ್ (38) ಹಾಗೂ 12 ವರ್ಷದ ಮಗಳು ಕಾವ್ಯಾ ಆತ್ಮಹತ್ಯೆ ಮಾಡಿಕೊಂಡವರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಗಳು ಕಾವ್ಯಾ ಮೃತದೇಹ ಪತ್ತೆಯಾಗಿದ್ದು, ತಾಯಿ ಶವಕ್ಕಾಗಿ ನದಿಯಲ್ಲಿ ಶೋಧ ನಡೆಸಲಾಗಿದೆ.

ಹಾವೇರಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button