Kannada NewsKarnataka NewsLatest

*ವರಮಹಾಲಕ್ಷ್ಮೀ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಗಿಫ್ಟ್*

ದೇವಸ್ಥಾನಗಳಲ್ಲಿ ಅರಿಶಿನ-ಕುಂಕುಮ ನೀಡಲು ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಕೊಡುಗೆ ನೀಡಿದೆ. ದೇವಸ್ಥಾನಗಳಲ್ಲಿ ಮಹಿಳಾ ಭಕ್ತರಿಗೆ ಅರಿಶಿನ-ಕುಂಕುಮ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ-ಕುಂಕುಮ ನೀಡುವಂತೆ ಆದೇಶ ನೀಡಿದೆ.

ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀ ಕೃಪಾಕಟಾಕ್ಷ ಲಭಿಸಲೆಂದು ಈ ದಿನದಂದು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿನ-ಕುಂಕುಮ ಹಾಗೂ ಹಸಿರುಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ತಿಳಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button