Belagavi NewsBelgaum NewsElection NewsKannada NewsKarnataka News

ರಾಜ್ಯಾದ್ಯಂತ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ವಿವಿಧ ದಲಿತ ಸಂಘಟನೆಗಳು 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರ್ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಅಥವಾ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ನೀಡುವಂತೆ, ಡಾ. ಬಿಆರ್ ಅಂಬೇಡ್ಕರ್ ದಲಿತ ಸಂಘಟನೆ ಒಕ್ಕೂಟ ವತಿಯಿಂದ ಬಾಹ್ಯ ಬೆಂಬಲ ನೀಡುತ್ತೇವೆ ಎಂದು ದಲಿತ ಒಕ್ಕೂಟಗಳ ಸಂಘಟನೆಯ ಅಧ್ಯಕ್ಷರಾದ ಶ್ರೀಧರ್ ಕಲವೀರ ಅವರು ತಿಳಿಸಿದ್ದಾರೆ

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸಂವಿಧಾನ ಬದಲಾವಣೆ ಕುರಿತು ಮಾತನಾಡುತ್ತಿದೆ. ಬಿಜೆಪಿ ದೇಶದಲ್ಲಿ ದ್ವೇಷ ಭಾವನೆ ಬೆಳೆಸುತ್ತಿರುವುದು ಹಾಗೂ ಧರ್ಮ, ಜಾತಿಗಳ ನಡುವೆ ದ್ವೇಷ ಹೊತ್ತಿಸುತ್ತಿರುವ ಕಾರಣದಿಂದಾಗಿ ರಾಜ್ಯದ ಎಲ್ಲಾ ದಲಿತ ಸಂಘಟನೆಗಳು ಒಮ್ಮತದ ನಿರ್ಣಯ ಮಾಡಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಬಾಹ್ಯ ಬೆಂಬಲವನ್ನು ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಅಶ್ವಥ್ ನಾರಾಯಣ್, ಭೀಮ ಆರ್ಮಿ ಭಾರತ ಏಕತಾ ಮಿಷನ್ ರಾಜ್ಯಾಧ್ಯಕ್ಷ ರಾಜಗೋಪಾಲ್ ಡಿ.ಎಸ್, ಬೆಂಗಳೂರು ದಲಿತ ಸಂಘರ್ಷ ಸೇನೆ, ರಾಜ್ಯಾಧ್ಯಕ್ಷ ಗೋಪಾಲ್, ಸಮುದಾಯದ ಮುಖಂಡ ಮಲ್ಲೇಶ್ ಚೌಗಲೆ, ಸುರೇಶ್ ತಳವಾರ, ಮಹದೇವ್ ತಳವಾರ, ಎಂ ಗೋವಿಂದರಾಜ್ , ಶಿವಮೊಗ್ಗ ರಾಜ್ಯ ಸಂಚಾಲಕರ ಎಂ ಗುರುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button