
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 2019-20 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕೃತ ಬಸ್ತವಾಡ ಗ್ರಾಮ ಪಂಚಾಯತದ ನೂತನ ಸಭಾ ಭವನ ಕಟ್ಟಡದ ಉದ್ಘಾಟನೆ ಶನಿವಾರ ನಡೆಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಎಲ್ಲ ಪಂಚಾಯತ್ ಸದಸ್ಯರುಗಳನ್ನು ಸತ್ಕರಿಸಿ ನೆನಪಿನ ಕಾಣಿಕೆಯನ್ನು ಕೊಟ್ಟು ಗೌರವಿಸಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಅರುಣ ಕಟಾಂಬಳೆ, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಸೈಕಲ್ ವಿತರಣೆ

ಹಿರೇ ಬಾಗೇವಾಡಿ ಗ್ರಾಮದ ಗ್ರೂಪ್ ವಿದ್ಯಾವರ್ಧಕ (ರಿ) ಕರ್ನಾಟಕ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಕರ್ನಾಟಕ ಪ್ರೌಢ ಶಾಲೆಯ ಮಕ್ಕಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸೈಕಲ್ ವಿತರಿಸಿದರು.
ಇದೇ ವೇಳೆ ಶಾಲಾ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಕ್ಕಳೊಂದಿಗೆ ಚರ್ಚಿಸಿದರು. ಗ್ರಾಮದ ಹಿರಿಯರು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಬಸ್ ನಿಲ್ದಾಣ ವೀಕ್ಷಣೆ

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬಸ್ ನಿಲ್ದಾಣ ವೀಕ್ಷಿಸಿ, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದ್ದು, ನಿರಂತರವಾಗಿ ಅಭಿವೃದ್ಧಿ ಯೋಜನೆಗಳನ್ನು ತರಲಾಗುತ್ತಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ