Latest

ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ; ಆರೋಪಿಗಳ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಕವಿರಾಜ್ ಹಾಗೂ ಅಮರೇಶ್ ಕಾಲಿಗೆ ಗುಂಡೇಟು ಹೊಡೆದು ಬೆಂಗಳೂರಿನ ಇಂದಿರಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕವಿರಾಜ್ ಹಾಗೂ ಟೀಂ ಜೈಲುಸೇರಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕವಿರಾಜ್ ಇಂದಿರಾನಗರ ಉದ್ಯಮಿ ವಿಜಯ್ ಕುಮಾರ್ ನನ್ನು ಅಪಹರಿಸಿ ಜುಲೈ 5ರಂದು ಹತ್ಯೆ ಮಾಡಿದ್ದರು.

ಹತ್ಯೆ ಬಳಿಕ ಆರೋಪಿಗಳು ಭೈಯ್ಯಪ್ಪನಹಳ್ಳಿ ಬಳಿ ತಲೆ ಮರೆಸಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಎಸ್ಕೇಪ್ ಆಗಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರುಕವಿರಾಜ್ ಹಾಗೂ ಅಮರೇಶ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
11 ಗಂಟೆಗೆ ಪ್ರಮಾಣವಚನ; ಸಂಪುಟ ರಚನೆ ಬಗ್ಗೆ ಮಹತ್ವದ ಮಾಹಿತಿ ತಿಳಿಸಿದ ನೂತನ ಸಿಎಂ

Related Articles

Back to top button