Belagavi NewsBelgaum NewsKarnataka News
*ಮುಂದಿನ ಒಂದು ವಾರ 20 ಜಿಲ್ಲೆಗಳಲ್ಲಿ ಅಬ್ಬರಿಸಲು ಮುಂದಾದ ವರುಣದೇವ*

ಪ್ರಗತಿವಾಹಿನಿ ಸುದ್ದಿ: ಮುಂದಿನ 1 ವಾರ ವಿವಿಧೆಡೆ ವರುಣದೇವ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ. ಭಾರಿ ಮಳೆ ಬೀಳುವ ಮುನ್ಸೂಚನೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.
ಬಿರುಬಿಸಿಲಿನ ನಡುವೆ ಇದೀಗ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದ್ದು ಜನರ ಮುಖದಲ್ಲಿ ಮಂದಹಾಸ ಮೂಡಿದೆ.



