*ಹಲವೆಡೆ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ* *ರಾಜ್ಯದಲ್ಲಿ ಒಂದು ವಾರ ಮತ್ತೆ ವರುಣಾರ್ಭಟ*
ಪ್ರಗತಿವಾಹಿನಿ ಸುದ್ದಿ: ಮುಂದಿನ ಒಂದು ವಾರಗಳವರೆಗೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಕಿರವತ್ತಿ, ಕೊಲ್ಲೂರು, ಹುಂಚದಕಟ್ಟೆ, ಮುಂಡಗೋಡು, ಕದ್ರಾ, ಸಿದ್ದಾಪುರ, ತ್ಯಾಗರ್ತಿ, ಜಯಪುರ, ಎನ್ಆರ್ಪುರ, ಬನವಾಸಿ, ಕಾರವಾರ, ಲೋಂಡಾ, ಆಗುಂಬೆ, ಹಿರೇಕೆರೂರು, ಕೊಟ್ಟಿಗೆಹಾರ, ಹಳಿಯಾಳ, ಯಲ್ಲಾಪುರ, ಕುಂದಗೋಳ, ಹಾವೇರಿ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಕುಮಟಾ, ಬೆಳಗಾವಿ, ಕಳಸ, ಬಾಳೆಹೊನ್ನೂರು, ದಾವಣಗೆರೆಯಲ್ಲಿ ಮಳೆಯಾಗಿದೆ.
ಗೋಕರ್ಣ, ಗೇರುಸೊಪ್ಪ, ಧಾರವಾಡ, ಲಕ್ಷ್ಮೇಶ್ವರ, ಧಾರವಾಡ, ನಾಯಕನಹಟ್ಟಿ, ಕಮ್ಮರಡಿ, ಕುಂದಾಪುರ, ಮಂಕಿ, ಹೊನ್ನಾವರ, ಧರ್ಮಸ್ಥಳ, ಕೋಟ, ಉಡುಪಿ, ಬೈಲಹೊಂಗಲ, ನಾಪೋಕ್ಲು, ಚನ್ನಗಿರಿ, ನರಗುಂದ, ದಾವಣಗೆರೆ, ಬೇಲೂರು, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.
ಬೆಳಗಾವಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬುಧವಾರ, ಗುರುವಾರ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಗುರುವಾರ ಹುಬ್ಬಳ್ಳಿ – ಧಾರವಾಡ ಬೈ ಪಾಸ್ ನಲ್ಲಿ 2-3 ಗಂಟೆಗಳ ಕಾಲ ಸಂಚಾರ ಸಮಸ್ಯೆ ಉಂಟಾಗಿತ್ತು. 4 -5 ಕಿಮೀ ವಾಹನ ನಿಂತಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ