Latest

*ವರುಣಾದಲ್ಲಿ ನಾನೇ ಅಭ್ಯರ್ಥಿ ಎಂದ ಡಾ.ಯತೀಂದ್ರ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ವರುಣಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತೀಂದ್ರ, ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಹಾಗಾಗಿ ವರುಣಾದಿಂದ ನಾನೇ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು.

Home add -Advt

ವರುಣಾ ಕ್ಷೇತ್ರ ಯಾವಾಗಲೂ ಕಾಂಗ್ರೆಸ್ ಭದ್ರಕೋಟೆ. ಬಿಜೆಪಿಯಿಂದ ಯಾರೇ ಸ್ಪರ್ಧೆ ಮಾಡಿದರೂ ನಮಗೆ ಭಯವಿಲ್ಲ, ಎಲ್ಲಾ ಪಕ್ಷದವರು ಗೆಲುವಿಗಾಗಿ ಸ್ಟ್ರ್ಯಾಟಜಿ ಮಾಡುತ್ತಾರೆ. ಏನೇ ಮಾಡಿದರೂ ಅಂತಿಮವಾಗಿ ವರುಣಾದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

*ಸಿಬಿಐಗೆ ಪತ್ರ ಬರೆಯುತ್ತೇನೆ ಎಂದ ಡಿ.ಕೆ.ಶಿವಕುಮಾರ್*

https://pragati.taskdun.com/d-k-shivakumarramesh-jarakiholireactionshivamogga/

Related Articles

Back to top button