*ಮತ್ತೆ ವರುಣನ ಅಬ್ಬರ: 48 ಗಂಟೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ, ವಿಜಯಪುರ, ಕಲಬುರ್ಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಾದ್ಯಂತ ಮುಂಗಾರು ಮಳೆ ಆರ್ಭಟ ತಗ್ಗಿತು ಎನ್ನುವಷ್ಟರಲ್ಲಿ ರಾಜ್ಯದಾದ್ಯಂತ ಮತ್ತೆ ಅಬ್ಬರಿಸಲು ವರುಣ ದೇವ ಸಜ್ಜಾಗಿದ್ದಾನೆ. ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ 48 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಂಭವವಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಮತ್ತು ಕೋಲಾರ, ತುಮಕೂರು ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ