ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಸರಕಾರಿ ಗುತ್ತಿಗೆ ಕಾಮಗಾರಿಗಳ ತೆರಿಗೆ ಗೊಂದಲ ಬಗೆಹರಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಜಿಎಸ್‌ಟಿ ಜಾರಿ ನಂತರದ ಕಾಮಗಾರಿಗಳಿಗೆ ಮಾತ್ರ ಜಿಎಸ್‌ಟಿ ಅನ್ವಯಿಸುತ್ತಿದ್ದು ಅದಕ್ಕೂ ಮೊದಲಿನ ಕಾಮಗಾರಿಗಳಿಗೆ ವ್ಯಾಟ್ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಹೇಳಿದೆ. ಈ ಮೂಲಕ ಭಾರಿ ಮೊತ್ತದ ತೆರಿಗೆ ಬಾಕಿ ಹೊಂದಿದ್ದ ಗುತ್ತಿಗೆದಾರರು ನಿಟ್ಟುಸಿರು ಬಿಟ್ಟಿದ್ದಾರೆ.
ಸರಕು ಮತ್ತು ಸೇವೆಗಳ ತೆರಿಗೆ ಕಾಯ್ದೆ (ಜಿಎಸ್‌ಟಿ) ಜಾರಿಯಾಗುವ ಮುನ್ನ ಸರಕಾರಿ ಗುತ್ತಿಗೆ ಕಾಮಗಾರಿಗಳ ಟೆಂಡರ್ ಪಡೆದು, ಜಿಎಸ್‌ಟಿ ಜಾರಿಯಾದ ನಂತರ ಕಾಮಗಾರಿ ಪೂರ್ಣಗೊಳಿಸಿದ ಪ್ರಕರಣಗಳ ಸಂಬಂಧ ತೆರಿಗೆ ಪಾವತಿಸುವ ವಿಚಾರದಲ್ಲಿ ಉದ್ಭವಿಸಿದ್ದ ಗೊಂದಲಗಳನ್ನು ನಿವಾರಿಸಲು ಹೈಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದೆ.
ಜಿಎಸ್‌ಟಿ ಜಾರಿಗೂ ಮುನ್ನ ಕರ್ನಾಟಕ ಮೌಲ್ಯವರ್ಧಿತ ತೆರಿಗೆ (ಕೆವ್ಯಾಟ್) ವ್ಯವಸ್ಥೆ ಇದ್ದಾಗ ನಡೆದಿರುವ ಸರಕಾರಿ ಗುತ್ತಿಗೆ ಕೆಲಸಗಳು ಮತ್ತು ಗುತ್ತಿಗೆದಾರರು ಪಡೆದಿರುವ ಹಣ ಲೆಕ್ಕ ಹಾಕಬೇಕು. ಜಿಎಸ್‌ಟಿ ಜಾರಿಯಾಗುವ, ಅಂದರೆ 2017ರ ಜು.1ರ ಪೂರ್ವ ಪಡೆದಿರುವ ಹಣವನ್ನು ಕೆವ್ಯಾಟ್ ವ್ಯವಸ್ಥೆ ಅಡಿಯೇ ವಿಶ್ಲೇಷಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಈ ಕುರಿತಂತೆ ಸಿ.ಚಂದ್ರಶೇಖರಯ್ಯ ಮತ್ತು ನಂದೀಶ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರಕಾರಿ ಕಾಮಗಾರಿ ನಡೆಸಿದ ಹಲವು ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ಸಲ್ಲಿಸಿದ್ದ 15ಕ್ಕೂ ಅಧಿಕ ತಕರಾರು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರ ಪೀಠ ಈ ಆದೇಶ ನೀಡಿದೆ.
https://pragati.taskdun.com/retired-judge-level-judicial-commission-to-probe-manipur-violence/
https://pragati.taskdun.com/allotment-of-additional-portfolio-to-two-ministers/
https://pragati.taskdun.com/21-thousand-government-employees-have-bpl-card/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ