ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳು ಬಂದ್ ಪ್ರತಿಭಟನೆಗೆ ಬೆಂಬಲ ನೀಡಿವೆ.
ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತ ಸಂಘಟನೆ, ಮತ್ತೊಂದೆಡೆ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಿತ್ರರಂಗದ ನಟ-ನಟಿಯರು, ಕನ್ನಡ ಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ ಬಂದು, ತಲೆಯ ಮೇಲೆ ಖಾಲಿ ಕೊಡ ಹೊತ್ತು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಾವು ಕಾವೇರಿ ನೀರಿಗಾಗಿ ಹೋರಾಟ ನಡೆಸಿದ್ದರೆ ಸರ್ಕಾರ ಪೊಲಿಸರ ಮೂಲಕ ನಮ್ಮ ಹೋರಾಟ ಹತ್ತಿಕ್ಕಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆ 5 ಗಂಟೆಗೇ ವಾಟಾಳ್ ಬಂಧನಕ್ಕೆ ಪೊಲೀಸರು ಮನೆಗೆ ತೆರಳಿದ್ದರು. ಆದರೆ ಅದಾಗಲೇ ನಾಪತ್ತೆಯಾಗಿದ್ದ ವಾಟಾಳ್ ಪ್ರತಿಭಟನೆಯಲ್ಲಿ ಹಾಜರಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ