Karnataka News

*ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಕೊಡಲು ಬಂದಿದ್ದೇವೆ ಎಂದ ವಾಟಾಳ್ ನಾಗರಾಜ್, ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮುಂಜಾಗೃತಾ ಕ್ರಮವಾಗಿ ವಾಟಾಳ್ ನಾಗರಾಜ್ ಹಾಗೂ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಹೋರಾಟ ಆರಂಭಿಸಿದ್ದು, ಇಂದಿನಿಂದ ಸಾಲು ಸಾಲು ಪ್ರತಿಭಟನೆಗಳಿಗೆ ಕರೆ ನೀಡಿದ್ದಾರೆ. ಇದರ ಭಾಗವಾಗಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಚಲೋ ನಡೆದಿದ್ದು, ಮುತ್ತಿಗೆ ಯತ್ನ ನಡೆದಿದೆ. ಮಾ.22ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button