Latest

ಎಂಇಎಸ್ ನಿಷೇಧಕ್ಕೆ ಆಗ್ರಹ; ಮಹಾ ಸಿಎಂ ಉದ್ಧವ್ ವಿರುದ್ಧ ಭುಗಿಲೆದ್ದ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿರುವ ಕನ್ನಡ ಪರ ಸಂಘಟನೆಗಳು ರೈಲ್ವೆ ಚಳುವಳಿ ಆರಂಭಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿ ನಮ್ಮದು. ಎಂಇಎಸ್ ಸಂಪೂರ್ಣ ನಿಷೇಧ ಮಾಡಬೇಕು. ಮಹಾ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವುದೇ ತಿರುಗೇಟು ನೀಡುತ್ತಿಲ್ಲ. ಹೀಗಾಗಿ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಇನ್ನು ಫೆಬ್ರವರಿ 21ರಂದು ನಾವು ಬೆಳಗಾವಿಗೆ ಹೋಗುತ್ತೇವೆ. ಮಹಾರಾಷ್ಟ್ರ ಗಡಿಗೆ 1 ಲಕ್ಷ ಮಂದಿ ನುಗ್ಗುತ್ತೇವೆ. ಮರಾಠಿ ನಾಮಫಲಕಗಳನ್ನು ಕಿತ್ತು ಬಿಸಾಕುತ್ತೇವೆ. ಈ ಮೂಲಕ ಉದ್ಧವ್ ಠಾಕ್ರೆಗೆ ನಾವು ಖಡಕ್ ಸಂದೇಶ ರವಾನಿಸಲಿದ್ದೇವೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button