Kannada NewsKarnataka NewsPolitics

*ವಿಬಿಜಿ ರಾಮ್ ಜಿ ಪ್ರಥಮ ತ್ರೈಮಾಸಿಕಕ್ಕೆ ರೂ.2900 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಗೆ ಹಣದ ಕೊರತೆ ಇಲ್ಲ. ಪ್ರಥಮ ತ್ರೈಮಾಸಿಕಕ್ಕೆ 2900 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ ಮೊದಲ ತ್ರೈಮಾಸಿಕಕ್ಕೆ 1700 ಕೋಟಿ ರೂ., ರಾಜ್ಯ ಸರ್ಕಾರ 1200 ಕೋಟಿ ಹಣವನ್ನು ನೀಡಿದೆ. ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದರು.

ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ, ಕೆರೆ ಕಾಲುವೆ ಅಭಿವೃದ್ಧಿ, ಚೆಕ್ ಡ್ಯಾಂ ಇತ್ಯಾದಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಉದ್ಯೋಗ ಕೇಳಿ ಬರುವ ಪ್ರತಿಯೊಬ್ಬರಿಗೂ, ಇರುವಲ್ಲೇ ಉದ್ಯೋಗ ನೀಡುವಂತೆ ಸಿಇಓಗಳಿಗೆ ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button