Kannada NewsKarnataka NewsLatestPolitics

*ವೀಣಾ ಕಾಶಪ್ಪನವರ್ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕಾಂಗ್ರೆಸ್ ನಾಯಕಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ನಗರದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ವೀಣಾ ಅವರ ಕೈ, ಎದೆ ಭಾಗಕ್ಕೆ ಪೆಟ್ಟಾಗಿದೆ. ಗಾಯಾಳು ವೀಣಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Home add -Advt

ವಿಜಯಪುರದಿಂದ ಸಿಂದಗಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಅಡ್ಡಲಾಗಿ ಬಂದ ಸ್ಕೂಟಿಯನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button