*ವೀರಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ: ಜನೆವರಿ 19ರಂದು ಸಿದ್ದರಾಮಯ್ಯ ಉದ್ಘಾಟನೆ*

“ವೀರಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಉದ್ಘಾಟನೆ ಪೂರ್ವ ಸಿದ್ಧತಾ ಸಭೆ
ನಂದಗಡ ಮ್ಯೂಸಿಯಂ ಜ.೧೯ ರಂದು ಲೋಕಾರ್ಪಣೆ: ಸಚಿವ ಶಿವರಾಜ ತಂಗಡಗಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : “ವೀರಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಜನವರಿ ೧೯ ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಪೂರ್ವ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ (ಜ.೦೯) ನಡೆದ “ವೀರಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಉದ್ಘಾಟನೆ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೀರಭೂಮಿ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಈಗಾಗಲೇ ಸಂಪೂರ್ಣ ಪೂರ್ಣಗೊಂಡಿದೆ. ಕೆಲವು ಸಣ್ಣ-ಪುಟ್ಟ ಬದಲಾವಣೆಗಳಿವೆ ಎಲ್ಲವನ್ನು ಬೇಗನೆ ಸಿದ್ಧತೆ ಮಾಡಿಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ.
ನಂದಗಡದಲ್ಲಿ ಕೆರೆಯ ಪಕ್ಕದಲ್ಲಿ ರಾಯಣ್ಣ ಮೂರ್ತಿ ಇರುವ ಕಾರಣ ಕೆರೆಯ ಸ್ವಚ್ಛತೆ ಕೈಗೊಂಡಲ್ಲಿ ಪ್ರತಿಮೆ ಕೂಡ ಇದೆ ಸಂದರ್ಭದಲ್ಲಿ ಅನಾವರಣಗಳಿಸಲು ಅನುಕೂಲವಾಗಲಿದೆ ಹೇಳಿದರು.
ಮ್ಯೂಸಿಯಂ ಉದ್ಘಾಟನೆ ಜೊತೆಗೆ ೨೩ ಕೋಟಿ ವೆಚ್ಚದಲ್ಲಿ ರಾಯಣ್ಣನ ಸಮಾಧಿಯ ಪಕ್ಕ ಗ್ಲಾಸ್ ಹೌಸ್ ನಿರ್ಮಿಸುವ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು.
ಕಾರ್ಯಕ್ರಮಕ್ಕೆ ಬರುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ಪಾಕಿಂಗ್, ಆಸನಗಳು, ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ತಿಳಿಸಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ ರೇವಣ್ಣ ಮಾತನಾಡಿ ಜನವರಿ ೧೯ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು “ವೀರಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಉದ್ಘಾಟನೆ ಮಾಡಲಿರುವ ಕಾರಣ ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.
ನಂದಗಡ ಕೆರೆ ಅಭಿವೃದ್ಧಿ, ಮೂರ್ತಿ ಪ್ರತಿ?ಪನೆ, ರಸ್ತೆ ಡಾಂಬರೀಕರಣ ಸೇರಿದಂತೆ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಸೂಚಿಸಿದರು.
ಪ್ರಥಮ ಸಿಪಾಯಿ ದಂಗೆಗಿಂತ ಮುಂಚೆ ಬ್ರಿಟಿ? ವಿರುದ್ಧ ಹೋರಾಡಿ ರಾಯಣ್ಣ ಹೆಸರಾದವರು. ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ ದೇಶ ಕಂಡ ಮಹಾನ್ ದೇಶ ಪ್ರೇಮಿ. ರಾಯಣ್ಣನ ಮ್ಯೂಸಿಯಂ ಉದ್ಘಾಟನೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಹೆಚ್.ಎಂ ರೇವಣ್ಣ ತಿಳಿಸಿದರು.
ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಖಾನಾಪೂರ ಶಾಸಕ ವಿಠ್ಠಲ ಹಲಗೇಕರ, ಬುಡಾ ಅಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ, ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಆರ್. ಶಾಲಿನಿ
ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕೆ. ರಾಮ್ ರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಪ್ರೊಬೇ?ನರಿ ಐಎಎಸ್ ಅಧಿಕಾರಿ ಅಭಿನವ ಜೈನ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
“ವೀರ ಭೂಮಿ” ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಪರಿವೀಕ್ಷಣೆ
ಶೀಘ್ರ ಲೋಕಾರ್ಪಣೆಗೆ ಸಿದ್ಧತೆ: ಸಚಿವ ಶಿವರಾಜ ತಂಗಡಗಿ
ಬೆಳಗಾವಿ, ಜ.೦೯ (ಕರ್ನಾಟಕ ವಾರ್ತೆ): ನಂದಗಡದಲ್ಲಿ ನಿರ್ಮಿಸಲಾಗುತ್ತಿರುವ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ “ವೀರ ಭೂಮಿ”ಯನ್ನು ಶೀಘ್ರವೇ ಲೋಕಾರ್ಪಣೆಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ತಿಳಿಸಿದರು.
ನಂದಗಡಲ್ಲಿ ಶುಕ್ರವಾರ (ಜ.೦೯) ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ “ವೀರ ಭೂಮಿ”ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.
ವಸ್ತು ಸಂಗ್ರಹಾಲಯ, ಹಾಲೊಗ್ರಾಮ ವೀಕ್ಷಣೆಯ ಗುಣಮಟ್ಟ, ಮೂರ್ತಿಗಳು, ಧ್ವನಿವರ್ಧಕ, ಗುಹೆ, ಕವಳ ಗುಡ್ಡ, ಡೈಮೆನ್ಶನ್ ಚಿತ್ರಮಂದಿರ, ಘಟನಾ ಚಿತ್ರಣದ ವಿವರ, ರಸ್ತೆ, ಉದ್ಯಾನವನ, ಅಲ್ಪೋಪಹಾರ ಗೃಹ, ವಾಹನಗಳ ಪಾಕಿಂಗ್ ವ್ಯವಸ್ಥೆ, ಶೌಚಾಲಯ, ಕಂಪೌಂಡ, ದೀಪಾಲಂಕಾರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ಕಾಲಮಿತಿಯೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಮ್ಯೂಸಿಯಂ ಸಂಪೂರ್ಣ ಮುಕ್ತಾಯಗೊಂಡಿದೆ ಪ್ರವಾಸಿಗರ ಬೇಡಿಕೆಯಂತೆ ಅವರಿಗೆ ತೊಂದರೆಯಾಗದ ರೀತಿಯಲ್ಲಿ ಶೀಘ್ರ ಸಂಗ್ರಹಾಲಯ ಪ್ರಾರಂಭಕ್ಕೆ ಯೋಜನೆ ರೂಪಿಸಲಾಗಿದೆ. ಅಂದಾಜು ೭೫ ಕೋಟಿ ವೆಚ್ಚದಲ್ಲಿ ರಾಯಣ್ಣ ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಮಾಹಿತಿ ನೀಡಿದರು.
ಶಾಲಾ ಕಾಲೇಜು ಮಕ್ಕಳಿಗೆ ರಿಯಾಯತಿ ದರದಲ್ಲಿ ಪ್ರವೇಶ ನೀಡಲಾಗುವುದು. ನಾಡಿಗಾಗಿ ಪ್ರಾಣ ತ್ಯಾಗ ಮಾಡಿದ ರಾಯಣ್ಣನ ದೇಶ ಪ್ರೇಮ, ಪ್ರತಿಯೊಬ್ಬರು ಅರಿಯಬೇಕು ಎಂಬ ಉದ್ದೇಶದಿಂದ ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ ರೇವಣ್ಣ ಮಾತನಾಡಿ ರಾಯಣ್ಣನ ವೀರಭೂಮಿ ನಂದಗಡದಲ್ಲಿರುವ ಕಾರಣ ರಾಯಣ್ಣ ಜೀವನ ಚರಿತ್ರೆ ಸಾರುವ ಮೂರ್ತಿಗಳಿರುವ ಮ್ಯೂಸಿಯಂ ನಂದಗಡದಲ್ಲಿ ನಿರ್ಮಾಣ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಕ? ಪ್ರೇಕ್ಷಕರನ್ನು ವಸ್ತು ಸಂಗ್ರಹಾಲಯ ಸೆಳೆಯಲಿದೆ ಎಂದರು.
ಖಾನಾಪೂರ ಶಾಸಕ ವಿಠ್ಠಲ ಹಲಗೇಕರ, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಆರ್. ಶಾಲಿನಿ, ಪ್ರೊಬೇ?ನರಿ ಐಎಎಸ್ ಅಧಿಕಾರಿ ಅಭಿನವ ಜೈನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಪಂಚಾಯಿತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ತಿತರಿದ್ದರು.




