Latest

*ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಂಸ ಮೊಯ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 46 ವರ್ಷದ ಹಂಸ ಮೊಹ್ಲಿ ಭರತನಾಟ್ಯ ಕಲಾವೆದೆಯಾಗಿದ್ದರು. ಕೆಲ ದಿನಗಳಿಮ್ದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನಾಳೆ ಬೆಳಿಗ್ಗೆ ಹಂಸ ಮೊಯ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಹಂಸ ಮೊಯ್ಲಿ ಚಲನಚಿತ್ರದಲ್ಲಿಯೂ ಅಭಿನಯಿಸಿದ್ದರು. ದೇವದಾಸಿಯರ ಜೀವನಾಧಾರಿತ ಕಥಾಹಂದರದ ಸಿನಿಮಾ ತಮಿಳಿನ ’ಶೃಂಗಾರಂ’ನಲ್ಲಿ ಅಭಿನಯಿಸಿದ್ದರು. ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button