ಪ್ರಗತಿವಾಹಿನಿ ಸುದ್ದಿ; ಚೆನ್ನೈ: ದಂತಚೋರ, ನರಹಂತಕ ವೀರಪ್ಪನ್ ಪುತ್ರಿ ವಿದ್ಯಾ ರಾಣಿಗೆ ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ವಿವಿಧ ವಿಭಾಗಗಳಲ್ಲಿ ಮುಖ್ಯ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಈ ಕುರಿತು ಬಿಜೆಪಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಬಗ್ಗೆ ವಿವರಿಸಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಪಕ್ಷ ಸೇರಿದ್ದ ವೀರಪ್ಪನ್ ಪುತ್ರಿ ವಿದ್ಯಾರಾಣಿಯವರನ್ನು ಪಕ್ಷದ ಯುವ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
2017 ರಲ್ಲಿ ಬಿಜೆಪಿಗೆ ಸೇರಿದ ಎಐಎಡಿಎಂಕೆ ಸಂಸ್ಥಾಪಕ ರಾಮಚಂದ್ರನ್ (ಎಂಜಿಆರ್)ದತ್ತು ಪುತ್ರಿ ಗೀತಾ ಮತ್ತು ಎಂಸಿ ಚಕ್ರಪಾಣಿ(ರಾಮಚಂದ್ರನ್ ಅವರ ಸಹೋದರ) ಅವರ ಮೊಮ್ಮಗ ಆರ್.ಪ್ರವೀಣ್ ಮತ್ತು ನಟಿ ರಾಧಾ ರವಿ ಅವರನ್ನು ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ.
ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ವರ್ಷದ ಮಾರ್ಚ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಲ್.ಮುರುಗನ್ ಅವರು ಪಕ್ಷವನ್ನು ರಾಜ್ಯದಲ್ಲಿ ಹೆಚ್ಚು ವಿಸ್ತರಿಸುವ ಬಗ್ಗೆ ಯೋಚಿಸಿದ್ದು ಈ ನಿಟ್ಟಿನಲ್ಲಿ ಈ ನೇಮಕಾತಿಗಳು ನಡೆದಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ