
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ, ವಿ.ಸೋಮಣ್ಣ, ಬಿ.ಸಿ.ಪಾಟೀಲ್ ಸೇರಿದಂತೆ ಹಲವು ಸಚಿವರು ನಿನ್ನೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ಯಡಿಯೂರಪ್ಪ ನಿಗಮ ಸ್ಥಾಪನೆಗೆ ಸಮ್ಮತಿ ಸೂಚಿಸಿದ್ದಾರೆ.
ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಸರ್ಕಾರದ ಮೇಲೆ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡಗಳು ಹೆಚ್ಚಿದ್ದವು.