Kannada NewsLatest

ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಸಿಎಂ ಐತಿಹಾಸಿಕ ನಿರ್ಧಾರ ಸ್ವಾಗತಾರ್ಹ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ‌ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಹುಕ್ಕೇರಿ ಹಿರೇಮಠದ ಶ್ರೀಗಳು ತಿಳಿಸಿದರು.

Home add -Advt

ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶ್ರೀಗಳು ಶುಭಹಾರೈಸಿದರು.

Related Articles

Back to top button