ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುರ್ವಣಸೌಧದಲ್ಲಿ ನಡೆದ ಪರಿಷತ್ ಕಲಾಪದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿಯವರ ಮಾತಿನ ಚಕಮಕಿಯಲ್ಲಿ ಸಿ.ಟಿ.ರವಿಯವರು ಲಕ್ಷ್ಮೀ ಹೆಬ್ಬಾಳಕರವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿನ ವರದಿಯನ್ನು ನೋಡಿ ತುಂಬಾ ಬೇಸರವಾಯಿತು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಖಂಡಿಸಿದ್ದಾರೆ.
ನಮ್ಮ ದೇಶದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆ ನಾಗರೀಕತೆ ಹೇಳುತ್ತದೆ. ಜನಪ್ರತಿನಿಧಿಗಳು ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಆಸಾಂವಿಧಾನಿಕ ಪದಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆ ಅವಾಚ್ಯ ಪದ ಬಳಕೆ ಮಾಡಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ತೀವ್ರವಾಗಿ ಖಂಡಿಸುತ್ತದೆ. ಅವಾಚ್ಯ ಪದ ಬಳಕೆ ಮಾಡಿರುವ ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳುವಂತೆ ಮಹಾಸಭೆಯು ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ