Politics

*ಶಾಸಕ ವೀರೇಂದ್ರ ಪಪ್ಪಿ ED ಕಸ್ಟಡಿಗೆ*

ಚಿತ್ರದುರ್ಗ: ಗೇಮಿಂಗ್ ಆಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದಾರೆ.

ಶಾಸಕ ವೀರೇಂದ್ರ ಪಪ್ಪಿಯನ್ನು ಬೆಂಗಳೂರುನ ೩೫ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆಗಸ್ಟ್ 28ರವರೆಗೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಶಾಸಕ ವೀರೇಂದ್ರ ಪಪ್ಪಿ ಅವರ ಕಂಪಗಳಿಂದ ಗೇಮಿಂಗ್ ಆ್ಯಪ್ ಗಳಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಇಡಿ ಅಧಿಕಾರಿಗಳು ವಿರೇಂದ್ರ ಪಪ್ಪಿ ಹಾಗೂ ಸಹೋದರ ಮನೆ, ಕಂಪನಿಗಳ ಮೇಲೆ ದಾಳಿ ನಡೆಸಿದ್ದರು.

Home add -Advt

Related Articles

Back to top button