Latest

ಬಂಗಾರದ ಬೆಲೆ ಇಂದು ಎಷ್ಟಿದೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಚಿನ್ನ, ಬೆಳ್ಳಿ ದರದಲ್ಲಿ ದೈನಂದಿನ ದರ ಬದಲಾವಣೆ ಸರ್ವೇಸಾಮಾನ್ಯ. ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸ್ಥಿರತೆ ಕಂಡು ಬಂದಿದ್ದ ಬಂಗಾರದ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. ಬೆಳ್ಳಿ ದರದಲ್ಲಿಯೂ ಕೊಂಚ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,150 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,500 ರೂ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂ.ನಷ್ಟು ಏರಿಕೆಯಾಗಿದೆ.

Home add -Advt

24 ಕ್ಯಾರೇಟ್ 10 ಗ್ರಾಂ ಚಿನ್ನಕ್ಕೆ 48,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,600 ರೂ ಆಗಿದೆ. ಬೆಳ್ಳಿದರದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದ್ದು, ಕೆಜಿ ಬೆಳ್ಳಿಗೆ 61,800 ರೂಪಾಯಿ ಇದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,300 ರೂ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನ 48,320 ರೂ ಆಗಿದ್ದು, 100 ಗ್ರಾಂ ಚಿನ್ನ 4,83,200 ರೂ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,800 ರೂ ಆಗಿದೆ.

ಇನ್ನು ದೆಹಲಿ, ಜೈಪುರ, ಮುಂಬೈ, ಹೈದರಾಬಾದ್ ಸೇರಿದಂತೆ ಎಲ್ಲಾ ಮಹಾನಗರಗಳಲ್ಲೂ ಚಿನ್ನ ಬೆಳ್ಳಿ ದರದಲ್ಲಿ ಇಂದು ಏರಿಕೆಯಾಗಿದೆ.
ಸಚಿವ ಸ್ಥಾನಕ್ಕಾಗಿ ಕಸರತ್ತು; ರಮೇಶ್ ಜಾರಕಿಹೊಳಿ ಟೆಂಪಲ್ ರನ್

Related Articles

Back to top button